ಪಾರ್ಟ್‌ಟೈಮ್ ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉಡುಪಿ, : ಪಾರ್ಟ್‌ ಟೈಮ್ ಉದ್ಯೋಗದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.

ಪ್ರಶಾಂತ್ ಅವರನ್ನು ಯಾರೋ ಅಪರಿಚಿತ ವ್ಯಕ್ತಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಪಾರ್ಟ್‌ ಟೈಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಟಾಸ್ಕ್ ಪೂರ್ಣಗೊಳಿಸಲು ತಿಳಿಸಿದ್ದರು. ಬಳಿಕ ಟಾಸ್ಕಿನಿಂದ ಬಂದ ಹಣವನ್ನು ಪಡೆಯಲು ಅಪರಿಚಿತ ವ್ಯಕ್ತಿಗಳು ತಿಳಿಸಿದ ಬ್ಯಾಂಕ್ ಖಾತೆಗೆ ಹಣವನ್ನು ಪಾವತಿಸಲು ತಿಳಿಸಿದ್ದರು.

 ಅದರಂತೆ ಅ.22ರಿಂದ 30ರ ನಡುವೆ ಆರೋಪಿಗಳು ಸೂಚಿಸಿರುವ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 3,01,000ರೂ.ಗಳನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದರು. ಆದರೆ ಆರೋಪಿಗಳು ಟಾಸ್ಕ್ ನಡೆಸಿ ಬಂದ ಹಣ ಹಾಗೂ ಪಡೆದ ಹಣವನ್ನು ಹಿಂದಿರುಗಿಸದೆ ನಷ್ಟ ಉಂಟುಮಾಡಿದ್ದಾರೆ.

ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.