ಈ ರೀತಿಯ ಆಹಾರ ಕ್ರಮಗಳನ್ನು ಬಳಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಬಹುದು..!!hear
Sunday, January 14, 2024
ಮೀನು
ಆರೋಗ್ಯಕರ ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯಕ್ಕೆ ಅತ್ಯಗತ್ಯ. ನಮ್ಮ ದೈನಂದಿನ ಆಹಾರದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸುವುದು ಮುಖ್ಯವಾಗಿದೆ. ಈ ರೀತಿಯ ಆಹಾರಗಳಲ್ಲಿ ಮೀನುಗಳು ಕೂಡಾ ಒಂದಾಗಿವೆ. ಮೀನುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ನಿಮ್ಮ ಹೃದಯವನ್ನ ಕಾಪಾಡಿಕೊಳ್ಳಬಹುದು.
ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಮತ್ತು ಫ್ಲೇವನಾಯ್ಡ್‌ಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ.
ಮಸಾಲೆಗಳು
ನಮ್ಮ ಅಡುಗೆಮನೆಯಲ್ಲಿನ ಮಸಾಲೆಗಳು ಅಡುಗೆ ರುಚಿಯನ್ನಷ್ಟೆ ಅಲ್ಲ ಹೃದಯದ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ. ಶುಂಠಿ, ಮೆಣಸು, ದಾಲ್ಚಿನ್ನಿ ಮತ್ತು ಲವಂಗದಂತಹ ಮಸಾಲೆಗಳಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಹೃದಯಾಘಾತವನ್ನು ತಡೆಯಲು ಸಹಾಯ ಮಾಡುವ ಮೂಲಕ ಹೃದಯದ ಆರೋಗ್ಯವನ್ನೂ ಸುಧಾರಿಸುತ್ತದೆ.
ಈರುಳ್ಳಿ
ಈರುಳ್ಳಿಯನ್ನು ಭಾರತಿಯರು ಪ್ರತಿನಿತ್ಯದ ಅಡುಗೆಯಲ್ಲಿ ಬಳಸುತ್ತಾರೆ. ಈರುಳ್ಳಿಯಲ್ಲಿರುವ ಸಲ್ಫರ್ ಮತ್ತು ಇತರ ಪೋಷಕಾಂಶಗಳು ಹೃದಯದ ಅಪಧಮನಿಗಳ ಅಡಚಣೆಯನ್ನು ತಡೆಯಲು ಸಹಾಯ ಮಾಡುತ್ತದೆ.