kadaba:-ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋಲು.. ಅರ್ಧ ಗಡ್ಡ, ಮೀಸೆ ತೆಗೆದ ಕಡಬದ ಯುವಕ..
Tuesday, January 30, 2024
ಕಡಬ
ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್ ಆಗಿದ್ದಾನೆ.
ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಎಂಬಾತ ಈ ಸಲದ ಬಿಗ್ ಬಾಸ್ ಸೀಸನ್ ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರಲಿದ್ದು, ಪ್ರತಾಪ್ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದ. ಅಲ್ಲದೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೊಂದು ವೀಡಿಯೋ ಹರಿಯಬಿಟ್ಟಿದ್ದ.
ಇದೀಗ ಕಾರ್ತಿಕ್ ವಿನ್ನರ್ ಆಗಿ ಹೊರ ಬಂದಿದ್ದು, ಪ್ರತಾಪ್ ರನ್ನರ್ ಅಪ್ ಗೆ ಸಮಾಧಾನ ಪಟ್ಟುಕೊಂಡಿದ್ದಾರೆ. ಫಲಿತಾಂಶ ಹೊರ ಬರುತ್ತಲೇ ಆಬಿದ್ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾನೆ. ಇದೀಗ ವೀಡಿಯೋ ವೈರಲ್ ಆಗಿದೆ.