ಪತ್ನಿಯ ಕತ್ತು ಸೀಳಿ ಹತ್ಯೆಗೈದು, ಮಗುವನ್ನು ಶವದ ಬಳಿ ಬಿಟ್ಟು ನಾಪತ್ತೆಯಾದ ಪತಿ - ಮುಂದೆ ನಡೆದದ್ದೇನು ಗೊತ್ತೇ
Tuesday, January 2, 2024
ಉತ್ತರ ಪ್ರದೇಶ: ಹರಿತವಾದ ಆಯುಧದಿಂದ ಪತ್ನಿಯ ಕತ್ತು ಸೀಳಿ, ತಲೆಮೇಲೆ ಇಟ್ಟಿಗೆಯಿಂದ ಹೊಡೆದು ಹತ್ಯೆಗೈದ ಯುವನೋರ್ವನು ಎರಡು ವರ್ಷದ ಪುತ್ರನನ್ನು ಪತ್ನಿಯ ಮೃತದೇಹದ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಪತ್ನಿಯನ್ನು ಹತ್ಯೆಗೈದ ಪತಿ, ತನ್ನ ಎರಡು ವರ್ಷದ ಪುತ್ರನನ್ನು ಸ್ಥಳದಲ್ಲೇ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಗಾಜಿಯಾಬಾದ್‌ನ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿರುವುದು ಗೌರವ್ ಶರ್ಮಾ(30). ಲಕ್ಷ್ಮಿ ರಾವತ್ (24) ಪತಿಯಿಂದ ಹತ್ಯೆಯಾದ ಮಹಿಳೆ.
ಆರೋಪಿ ಪತಿ ತನ್ನ ಪತ್ನಿ ಲಕ್ಷ್ಮೀ ರಾವತ್ ನನ್ನು ಚೂಪಾದ ಆಯುಧದಿಂದ ಪತ್ನಿಯ ಕತ್ತು ಸೀಳಿ, ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬಂದು ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಗಾಯಗೊಂಡ ಮಗು ತಾಯಿಯ ಮೃತದೇಹದ ಮುಂದೆ ಅಳುತ್ತಿರುವುದು ಕಂಡುಬಂದಿದೆ. ಮೃತ ಮಹಿಳೆಯ ಮೊಬೈಲ್ ಫೋನ್ ಶೌಚಾಲಯದ ಸೀಟಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಗೊಂಡ ಮಗುವನ್ನು ತಕ್ಷಣವೇ ಸಿವಿಲ್ ಆಸ್ಪತ್ರೆಗೆ ಕರೆದೊಯ್ದು ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ,