ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ನಗ-ನಗದು ದೋಚಿದ ಮುಸುಕುಧಾರಿಗಳು


ಬಂಟ್ವಾಳ: ನಾಲ್ವರ ಮುಸುಕುಧಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದ ಮನೆಯೊಂದಕ್ಕೆ ನುಗ್ಗಿ ತಾಯಿ ಹಾಗೂ ಮಗಳಿಗೆ ಚಾಕು ತೋರಿಸಿ ಬೆದರಿಸಿ ಲಕ್ಷಾಂತರ ರೂ. ನಗ-ನಗದನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಪ್ಲೋರಿನ್ ಪಿಂಟೊ ಎಂಬವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ. ಮನೆಯಲ್ಲಿ ಪ್ಲೋರಿನಾ ಪಿಂಟೊ ಹಾಗೂ ಅವರ ಪುತ್ರಿ ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದಿದ್ದರು.  ಇಂದು ಬೆಳ್ಳಂಬೆಳಗ್ಗೆ ಸುಮಾರು 6.30ರ ವೇಳೆಗೆ ಮನೆಯ ಕಾಲಿಂಗ್ ಬೆಲ್ ಆಗಿದೆ. ಆದ್ದರಿಂದ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ತಾಯಿ - ಮಗಳು ಬಗ್ಗದಿದ್ದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾರೆ. ಆದ್ದರಿಂದ ಗಾದ್ರೇಜ್ ಕೀಯನ್ನು ನೀಡಿದ್ದಾರೆ. ಕೀ ಪಡೆದ ಮುಸುಕುಧಾರಿಗಳು ಗೊದ್ರೇಜ್ ನಲ್ಲಿ ಇರಿಸಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಸೇರಿದಂತೆ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಲಾಗಿದೆ.
  
ನಗನಗದು ದೋಚುವ ವೇಳೆ ಅಡ್ಡ ಬಂದ ಪುತ್ರಿ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ.  ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu