ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್- 1000 ಗ್ರಾಮ ಲೆಕ್ಕಿಗರ ನೇಮಕಾತಿ ಅಧಿಸೂಚನೆ ಪ್ರಕಟ
Thursday, February 29, 2024
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯಸರ್ಕಾರ 1000 ಆಡಳಿತಾಧಿಕಾರಿಹುದ್ದೆಯನ್ನು ಪೂರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಒಟ್ಟು 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಆಹ್ವಾನಿಸಿದ್ದಾರೆ . ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಹುದ್ದೆಗಳ ಸಂಖ್ಯೆ: 1000
ವೇತನ ಶ್ರೇಣಿ: Rs. 21400-42000
ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ ದ್ವಿತೀಯ ಪಿಯುಸಿ / ಎನ್‌ಐಓಎಸ್ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ ಉತ್ತೀರ್ಣರಾಗಿರಬೇಕು
ವಯಸ್ಸಿನ ಬಗ್ಗೆ ಮಾಹಿತಿ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿಯಿರಬಾರದು
ಅರ್ಜಿ ಸಲ್ಲಿಸುವ ದಿನಾಂಕ
ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿ ಸಲ್ಲಿಸವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮಾರ್ಚ್ 4 ರಂದು ಬೆಳಗ್ಗೆ 11 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 3 (ರಾತ್ರಿ 11.50ರ ವರೆಗೆ) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಸಲ್ಲಿಸ ಬೇಕಾದ ಮೊತ್ತ
ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 750 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿಸಬಹುದಾಗಿದೆ.