ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬ್ಯಾಟರಿ ಸಹಿತ 3.90ಲಕ್ಷ ರೂ. ಸೊತ್ತನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉಳ್ಳಾಲ ತಾಲೂಕಿನ ಸೋಮೇಶ್ವರದ ತಲಪಾಡಿಯ ಕಜೆ ನಿವಾಸಿ ರಿಯಾಜ್(30) ಬಂಧಿತ ಆರೋಪಿ.
ಆರೋಪಿ ರಿಯಾಜ್ ತಲಪಾಡಿ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ತಲಪಾಡಿಯನ್ನು ನಾಟೇಕಲ್ ಬಳಿ ಪೊಲೀಸರು ಬಂಧಿಸಿದ್ದಾರೆ. ಈತ ಕಳವುಗೈದಿರುವ ಬ್ಯಾಟರಿ ಸೇರಿದಂತೆ ಕೃತ್ಯಕ್ಕೆ ಉಪಯೋಗಿಸಿರುವ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.