ಬೆಳ್ತಂಗಡಿ: ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿ ಢಿಕ್ಕಿ - ಇಬ್ಬರು ಸ್ಥಳದಲ್ಲೇ ಮೃತ್ಯು



ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಭೀಕರ ಅಪಘಾತ ನಡೆದು ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾದ ಘಟನೆ ಸಂಭವಿಸಿದೆ.

ಅತಿ ವೇಗವಾಗಿ ಬಂದ ಲಾರಿಯು ಉಜಿರೆಯ ಎರ್ನೋಡಿ ಬಳಿ ಬಸ್ ಗಾಗಿ ಕಾಯುತ್ತಿದ್ದವರ ಮೇಲೆಯೇ ಎರಗಿದೆ. ಪರಿಣಾಮ ಲಾರಿಯಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಓರ್ವ ಪುರುಷ ಹಾಗೂ ಮತ್ತೋರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅತೀ ರಭಸದಲ್ಲಿ ಬಂದ ಈ ಲಾರಿ ನಿಯಂತ್ರಣಕ್ಕೆ ಸಿಕ್ಕದೆ ವಿದ್ಯುತ್ ಕಂಬಗಳು ಹಾಗೂ ಕಟ್ಟಡಕ್ಕೂ ಡಿಕ್ಕಿಯಾಗಿದೆ. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu