-->
ಉಳ್ಳಾಲ‌: ದುಬೈನಲ್ಲಿ ನಡೆದ ಅಪಘಾತದಲ್ಲಿ ಉಳ್ಳಾಲದ ವಿದಿಶಾ ವಿಧಿವಶ

ಉಳ್ಳಾಲ‌: ದುಬೈನಲ್ಲಿ ನಡೆದ ಅಪಘಾತದಲ್ಲಿ ಉಳ್ಳಾಲದ ವಿದಿಶಾ ವಿಧಿವಶ

ಉಳ್ಳಾಲ: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು, ಬೀರಿಯ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬ ಯುವತಿ ವಿಧಿವಶರಾಗಿದ್ದಾರೆ.

ಮಂಗಳೂರು ತಾಪಂ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಪ್ರತಿದಿನ ಕಂಪೆನಿಯ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಗುರುವಾರ ಕ್ಯಾಬ್ ತಪ್ಪಿರುವ ಹಿನ್ನಲೆಯಲ್ಲಿ ತಮ್ಮದೇ ಕಾರಿನಲ್ಲಿ ತೆರಳಿದ್ದಾರೆ. ಆದರೆ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡ‌ರ್ ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದಿಸೆಯಲ್ಲೇ ರೋಟರಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.



ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬೈಗೆ ತೆರಳಿ ಅಲ್ಲಿನ ಏರ್ಪೋಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. 

ಹೊಸ ಕಾರು ಖರೀದಿಸಿದ್ದ ವಿದಿಶಾ ದುಬೈಯಲ್ಲಿ ವಾಹನ ಚಾಲನಾ ಪರವಾನಿಗೆ ಪಡೆದ ಬಳಿಕ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ಪೋಷಕರು ಸದ್ಯ ಪುತ್ರಿಯ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.

Ads on article

Advertise in articles 1

advertising articles 2

Advertise under the article