ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಾಲಕ ಮೃತ್ಯು
Thursday, February 29, 2024
ಕಾಪು: ಇಲ್ಲಿನ ಪಾಂಗಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಕಾರು ಚಾಲಕ ನಾಗೇಶ್ (70) ಮೃತಪಟ್ಟ ದುರ್ದೈವಿ.
ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ನಾಗೇಶ್, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕಾಪು ಎಸೈ ಅಬ್ದುಲ್ ಖಾದರ್, ಕ್ರೈಂ ಎಸೈ ಪುರುಷೋತ್ತಮ್ ಹಾಗೂ ಪೋಲಿಸರು, ಹೆದ್ದಾರಿ ಗಸ್ತು ಪಡೆ ಆಗಮಿಸಿದ್ದು, ಕಾರು ಹಾಗು ಲಾರಿಯನ್ನು ತೆರವುಗೊಳಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.