-->

ಪವರ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಪವರ್ ಸ್ಟಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಈಗಿನಿಂದಲೇ ತಯಾರಿನಡೆಯುತ್ತಿದೆ . ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ ಅಂದು ಅವರ ನಟನೆಯ ಜಾಕಿ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

 ದುನಿಯಾ ಸೂರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ.

ಚಿತ್ರದ ಕಥೆ, ಅಪ್ಪು ಡಾನ್ಸ್ ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು. ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ಈ ಬಾರಿ ಥಿಯೇಟರ್ ಗೆ ತರಲಾಗುತ್ತಿದೆ. ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ನೋಡಬಹುದಾಗಿದೆಯಂತೆ.

Ads on article

Advertise in articles 1

advertising articles 2

Advertise under the article