ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಸಾವಿಗೆ ಶರಣು


ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದಲೇ ನೇತ್ರಾವತಿ ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ 6.20 ಕ್ಕೆ ನಡೆದಿದೆ.

ತುಮಕೂರು ಮೂಲದ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರ ಬ್ಯಾಗ್ ನಲ್ಲಿ ದೊರೆತಿರುವ ಆಧಾರ್ ಕಾರ್ಡ್ ನಲ್ಲಿದ್ದ ಹೆಸರಿನ ಆಧಾರದ ಮೇಲೆ ರೈಲ್ವೆ ಪೊಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ

ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿರುವ ಯುವತಿಯು ಬಿ.ಸಿ.ರೋಡ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ರೈಲು ಬರುತ್ತಿದ್ದಂತೆ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕುಳಿತಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿ ಬಿ.ಸಿ.ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಹಾಗೂ ಆಕೆಯ ವಿಳಾಸ ವಿವರ ಇನ್ನಷ್ಟೇ ತಿಳಿಯಬೇಕಿದೆ.

ನದಿಯಲ್ಲಿ ತೇಲಾಡುತ್ತಿದ್ದ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ  ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.