-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಪಾಧ್ಯಕ್ಷನಿಗೆ ನಾಯಕಿಯಾಗಿದ್ದ ಬೆಡಗಿ ವಿದ್ಯಾಪತಿಗೆ ಜೋಡಿ

ಉಪಾಧ್ಯಕ್ಷನಿಗೆ ನಾಯಕಿಯಾಗಿದ್ದ ಬೆಡಗಿ ವಿದ್ಯಾಪತಿಗೆ ಜೋಡಿ


ಬೆಂಗಳೂರು: ಹಿಟ್ಲರ್ ಕಲ್ಯಾಣ ಮಿಂಚಿದ ನಟಿ ಮಲೈಕಾ ವಸೂಪಾಲ್ ಸೂಪರ್ ಹಿಟ್ ಆದ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕಿಯಾಗಿಯೂ ಯಶಸ್ಸು ಗಳಿಸಿದ್ದರು.‌ ಇದೀಗ ಡಾಲಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಹೊಸ ಸಿನಿಮಾಕ್ಕೆ ನಾಯಕಿಯಾಗಿದ್ದಾರೆ. ‘ಟಗರು ಪಲ್ಯ’ ಸಿನಿಮಾದ ಯಶಸ್ಸಿನ ಬಳಿಕ ಡಾಲಿ ಧನಂಜಯ್ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಹೆಸರು ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ಉಪಾಧ್ಯಕ್ಷ ಸಿನಿಮಾದಲ್ಲಿ ಮಲೈಕಾ ವಸೂಪಾಲ್ ನಾಯಕಿ ಮಿಂಚಿದ್ದರು. ಇದೀಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ‘ಉಪಾಧ್ಯಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಪ್ರವೇಶ ಮಾಡಿದ್ದರು. ಮೊದಲ ಸಿನಿಮಾದಲ್ಲಿಯೇ ಮಲೈಕಾಗೆ ದೊಡ್ಡ ಯಶಸ್ಸು ತಂದುಕೊಟ್ಟಿದೆ. ‘ಉಪಾಧ್ಯಕ್ಷ’ ಸಿನಿಮಾದಲ್ಲಿ ಇವರ ನಟನೆ ನೋಡಿ ಮೆಚ್ಚಿಕೊಂಡಿರುವ ‘ವಿದ್ಯಾಪತಿ’ ಚಿತ್ರತಂಡ ತಮ್ಮ ಸಿನಿಮಾಕ್ಕೆ ನಾಯಕಿಯನ್ನಾಗಿ ಆಯ್ಕೆ ಮಾಡಿದೆ.

ವಿದ್ಯಾಪತಿ’ ಸಿನಿಮಾದಲ್ಲಿ ಮಲೈಕಾ, ವಿದ್ಯಾ ಹೆಸರಿನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಸರಳ, ಪಕ್ಕದ ಮನೆ ಹುಡುಗಿಯಾಗಿ ಮಲೈಕಾ ಈ ಸಿನಿಮಾನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಇಕ್ಕಟ್’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ‘ವಿದ್ಯಾಪತಿ’ ಸಿನಿಮಾದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ‘ವಿದ್ಯಾಪತಿ’ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ