ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಮೂವರು ಅರೆಸ್ಟ್
Saturday, February 3, 2024
ಬೆಂಗಳೂರು: ಒರಿಸ್ಸಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಮೂವರು ಖತರ್ನಾಕ್ ಖದೀಮರನ್ನು ಆಂಧ್ರಪ್ರದೇಶದ ವಿಶೇಷ ಜಾರಿ ಬ್ಯೂರೋ (SEB) ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಗುಂಟೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಎಚ್‌ಎಸ್‌ಆರ್ ಲೇಔಟ್ ನಿವಾಸಿ ಕಿಶೋರ್ ಪಾಲಾಕ್ಷ ರೆಡ್ಡಿ (34), ಸುದ್ದುಗುಂಟೆಪಾಳ್ಯ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಪುತ್ರ ಅಭಿನಯ್ (30), ಸುಮಂತ್ ಕುಮಾರ್ (24) ಬಂಧಿತ ಆರೋಪಿ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರಿಫ್ ಹಜೀಫ್ ಈ ಕುರಿತು ಪ್ರತಿಕ್ರಿಯಿಸಿ, ಆರೋಪಿಗಳು ಒರಿಸ್ಸಾದಿಂದ ಕೊರಾಪುಟ್ ಜಿಲ್ಲೆಯ ಅರಗೊಂಡಾ ಗ್ರಾಮದಲ್ಲಿ 60 ಕೆಜಿ ಗಾಂಜಾ ಖರೀದಿಸಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಗಾಂಜಾ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಗುಂಟೂರು ಜಿಲ್ಲೆಯ ಪೊಟ್ಟೂರು ಗ್ರಾಮದ ಹೆದ್ದಾರಿಯಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತರಿಂದ 60 ಕೆಜಿ ಗಾಂಜಾ, ಏಳು ಮೊಬೈಲ್, ಎರಡು ಕಾರು ಮತ್ತು 2.28 ಲಕ್ಷ ನಗದು ಸೇರಿದಂತೆ ಒಟ್ಟು 44 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರಿಫ್ ಹಜೀಫ್ ಮಾಹಿತಿ ನೀಡಿದ್ದಾರೆ.