-->

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಮೇಲೆ ಕ್ರಮಕ್ಕೆ ಪೋಷಕರಿಂದ ಪೊಲೀಸ್ ಕಮಿಷನರ್ ಭೇಟಿ

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಮೇಲೆ ಕ್ರಮಕ್ಕೆ ಪೋಷಕರಿಂದ ಪೊಲೀಸ್ ಕಮಿಷನರ್ ಭೇಟಿ


ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಪಾಠ ಮಾಡುತ್ತಿದ್ದಾಗಲೇ ಹಿಂದೂ ಧರ್ಮದ ನಿಂದನೆ ಮಾಡಿದ್ದಾರೆಂಬ ಆರೋಪವಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೋಷಕರ ತಂಡ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.

ಏಳನೇ ತರಗತಿಗೆ 'work and worship' ಎಂಬ ರವೀಂದ್ರನಾಥ್ ಟಾಗೋರ್ ರವರ ಪದ್ಯವನ್ನು ಪಾಠ ಮಾಡುವಾಗ ಶಿಕ್ಷಕಿ ಹಿಂದೂ ಧರ್ಮದ ನಿಂದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಪೋಷಕರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದರೂ, ಕ್ರಮ ಆಗಿಲ್ಲವೆಂದು ಪೋಷಕರು ಪೊಲೀಸ್ ಕಮಿಷನರ್ ಅವರಲ್ಲಿ ವಿಚಾರಿಸಿದ್ದಾರೆ. ಅಲ್ಲದೆ ಶಾಸಕ ವೇದವ್ಯಾಸ ಕಾಮತ್, ಇಬ್ಬರು ಕಾರ್ಪೊರೇಟರ್ ಗಳು, ಸ್ಥಳದಲ್ಲಿಯೇ ಇಲ್ಲದ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಅವರುಗಳ ಮೇಲೆ ಹಾಕಿರುವ ಸುಳ್ಳು ಪ್ರಕರಣವನ್ನು ಹಿಂಪಡೆಯಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ. 


Ads on article

Advertise in articles 1

advertising articles 2

Advertise under the article