ಮಂಗಳೂರು: ಬಿಜೆಪಿ ವಿರುದ್ಧ ಬಂಡಾಯ ಸ್ಪರ್ಧಿಯಾಗಿ ಚುನಾವಣಾ ಕಣಕ್ಕಿಳಿಯಲು ಅರುಣ್ ಕುಮಾರ್ ಪುತ್ತಿಲ ನಿರ್ಧಾರ
Thursday, February 29, 2024
ಮಂಗಳೂರು: ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಾ ಪ್ರಕಟಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಸದ್ಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪುತ್ತಿಲ ಅವರು ಮತ್ತೆ ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿ ಮಾತುಕತೆಯೂ ನಡೆದಿತ್ತು.
ಆದರೆ ಸಾಮಾನ್ಯ ಕಾರ್ಯಕರ್ತರಾಗಿ ಅವರನ್ನು ಬಿಜೆಪಿ ಸೇರ್ಪಡೆಗೊಳ್ಳಬಹುದು ಎಂದು ಸೂಚಿಸಲಾಗಿತ್ತು. ಇದರಿಂದ ಮಾತುಕತೆ ವಿಫಲವಾಗಿ ಪಕ್ಷೇತರನಾಗಿ ಕಣಕ್ಕಿಳಿಯಲು ಪುತ್ತಿಲ ನಿರ್ಧರಿಸಿದ್ದಾರೆ. ಆದ್ದರಿಂದ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಸುದ್ಧಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.