-->

ಮಂಗಳೂರು: ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಹ್ಯಾದ್ರಿ ಮೈದಾನ ಸಜ್ಜು

ಮಂಗಳೂರು: ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಹ್ಯಾದ್ರಿ ಮೈದಾನ ಸಜ್ಜು


ಮಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ. ಅದಕ್ಕಿಂತ ಮೊದಲೇ ಕಾಂಗ್ರೆಸ್ ಚುನಾವಣೆಗೆ ಸಜ್ಜಾಗುತ್ತಿದೆ. ಅದಕ್ಕಾಗಿ ನಾಳೆ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಭಾರೀ ತಯಾರಿ ಆಗುತ್ತಿದೆ.

ನಗರದ ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿರುವ ಸಮಾವೇಶ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಕಾರ್ಯಕರ್ತರು, ರಾಜ್ಯದ ವಿವಿಧ ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಅಂತಿಮ ಸಿದ್ಧತೆಗಳು ನಡೆಯುತ್ತಿದೆ. ಸಮಾವೇಶಕ್ಕೆ ಬೃಹತ್ ವೇದಿಕೆ ಸನ್ನದ್ಧವಾಗಿದೆ. ಸಾವಿರ ಸಾವಿರ ಆಸನಗಳನ್ನು ಜೋಡಿಸಲಾಗುತ್ತಿದೆ. ಸಮಾವೇಶ ನಡೆಯುವ ಮೈದಾನಕ್ಕೆ ಆಗಮಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ, ಸಮಾವೇಶ ಹೋರ್ಡಿಂಗ್ಸ್ ಗಳು, ಬಂಟಿಂಗ್ಸ್ ಗಳು ರಾರಾಜಿಸುತ್ತಿದೆ.

Ads on article

Advertise in articles 1

advertising articles 2

Advertise under the article