ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ಆರೋಪ: ಮೂವರ ಬಂಧನ
Monday, February 26, 2024
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಯಲಹಂಕದ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ 7ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ.
ಪ್ರಕರಣದಲ್ಲಿ ಆಂಜನೇಯ ಗೌಡ, ಆಂಜನೇಯ ರೆಡ್ಡಿ ಹಾಗೂ ಹರೀಶ್ ಎಂಬುವರನ್ನು ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಲಹಂಕ ಉಪನಗರದ ಬಿ ಸೆಕ್ಟರ್ ನಲ್ಲಿರುವ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಥಾಯ್ಲೆಂಡ್ ದೇಶದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಟೂರಿಸ್ಟ್ ವೀಸಾ ಹಾಗೂ ಬಿನ್ನೆಸ್ ವೀಸಾ ಮೂಲಕ ಆರೋಪಿಗಳು ಮಹಿಳೆಯರನ್ನು ಕರೆ ತಂದಿರುವುದು ತನಿಖೆಯಲ್ಲಿ ಬಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.