ಪುತ್ತೂರು: ನವವಿವಾಹಿತೆ ನೇಣುಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಹಾಗೂ ಪುಷ್ಪಾ ದಂಪತಿಯ ಪುತ್ರಿ ಶೋಭಾ (26) ಆತ್ಮಹತ್ಯೆ ಮಾಡಿಕೊಂಡವರು. ಶೋಭಾ ಅವರಿಗೆ ಒಂದೂವರೆ ತಿಂಗಳ ಹಿಂದಷ್ಟೇ ಪುತ್ತೂರಿನ ಕುರಿಯ ಗಡಾಜೆಯ ರೋಹಿತ್ ಎಂಬವರೊಂದಿಗೆ ಮದುವೆಯಾಗಿತ್ತು.
ಆದರೆ ಶೋಭಾ ಅವರು ಪತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.