ಉಡುಪಿ: ಮಣಿಪಾಲ ಯುನಿವರ್ಸಿಟಿ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ - ಹಾರುತ್ತಿರುವ ವೀಡಿಯೋ ವೈರಲ್
Tuesday, February 20, 2024
ಉಡುಪಿ: ಪರೀಕ್ಷೆ ಬರೆಯುತ್ತಿದ್ದಾಗ ನಡೆದ ಘಟನೆಯಿಂದ ಮನನೊಂದ ಕಾಲೇಜು ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ ಆತ್ಮಹತ್ಯೆ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಮಣಿಪಾಲದ ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈ ಘಟನೆ ಎರಡು ದಿನಗಳ ಹಿಂದೆ ಮಣಿಪಾಲದ ಕಾಲೇಜಿನಲ್ಲಿ ಸಂಭವಿಸಿತ್ತು.
ಪರೀಕ್ಷೆ ನಡೆಯುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿರುವ ಸತ್ಯಂ ಸುಮನ್ ಮೊಬೈಲ್ ಬಳಕೆ ಮಾಡಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಪರಿಣಾಮ ಮನನೊಂದ ವಿದ್ಯಾರ್ಥಿ ಪರೀಕ್ಷಾ ಕೇಂದ್ರದಿಂದಲೇ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈ ದೃಶ್ಯ ವೈರಲ್ ಆಗುತ್ತಿದೆ.