-->

ಮಾ.14 ಅಥವಾ 15 ಲೋಕಸಭಾ ಚುನಾವಣೆ ದಿನಾಂಕ ಪ್ರಕಟ - ಮಾ.14ರಿಂದಲೇ ನೀತಿ ಸಂಹಿತೆ ಜಾರಿ

ಮಾ.14 ಅಥವಾ 15 ಲೋಕಸಭಾ ಚುನಾವಣೆ ದಿನಾಂಕ ಪ್ರಕಟ - ಮಾ.14ರಿಂದಲೇ ನೀತಿ ಸಂಹಿತೆ ಜಾರಿ


ನವದೆಹಲಿ: ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕವನ್ನು ಮಾರ್ಚ್ ಮಧ್ಯೆ ಘೋಷಣೆಯಾಗುವ ಸಾಧ್ಯತೆ ಇದೆ. ಸುಮಾರು ಏಳು ಹಂತಗಳಲ್ಲಿ ದೇಶಾದ್ಯಂತ ಲೋಕಾ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಮೂಲಗಳ ಪ್ರಕಾರ, ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣೆ ಘೋಷಣೆಯಾಗಲಿದೆ. 2019ರ ಲೋಕಸಭಾ ಚುನಾವಣೆಯಂತೆಯೇ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಎಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ‌ ಎನ್ನಲಾಗುತ್ತಿದೆ.

ಆದ್ದರಿಂದ ಮಾರ್ಚ್ 14ರಿಂದ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ. ಬಿಜೆಪಿ ಈಗಾಗಲೇ 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿ, ಅಮಿತ್ ಷಾ ಸೇರಿದಂತೆ ಗಣ್ಯ ನಾಯಕರ ಹೆಸರು ಮೊದಲ ಪಟ್ಟಿಯಲ್ಲಿದೆ.  ಮೂರನೇ ಬಾರಿಯೂ ಗೆದ್ದು ಬರುವ ನಿರೀಕ್ಷೆಯಲ್ಲಿ ಬಿಜೆಪಿಯಿದೆ. ಇತ್ತ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವೂ ಕೂಡ ಚುನಾವಣೆಗೆ ಸನ್ನದ್ಧಗೊಂಡಿದೆ. ಇಂಡಿಯಾ ಕೂಟದೊಂದಿಗೆ ಸೀಟು ಹಂಚಿಕೆ ವಿಚಾರ ಇನ್ನು ಚರ್ಚೆಯಲ್ಲಿದೆ ಎಂದು ಕಾಂಗ್ರೆಸ್ ಹೇಳಿದೆ.

Ads on article

Advertise in articles 1

advertising articles 2

Advertise under the article