-->
ಮೂಡುಬಿದಿರೆ: ಮಾ.31, ಎ.14ರಂದು ಆಳ್ವಾಸ್‌ನಲ್ಲಿ ಬೃಹತ್ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ - ಪಿಯುಸಿ ವಿದ್ಯಾರ್ಥಿಗಳೇ ಈ ಅವಕಾಶ ಮಿಸ್ ಮಾಡ್ಬೇಡಿ

ಮೂಡುಬಿದಿರೆ: ಮಾ.31, ಎ.14ರಂದು ಆಳ್ವಾಸ್‌ನಲ್ಲಿ ಬೃಹತ್ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ - ಪಿಯುಸಿ ವಿದ್ಯಾರ್ಥಿಗಳೇ ಈ ಅವಕಾಶ ಮಿಸ್ ಮಾಡ್ಬೇಡಿ

ಮೂಡುಬಿದಿರೆ: ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ನೀಡುತ್ತಿದೆ.


ಎಸ್ಸೆಸ್ಸೆಲ್ಸಿಯಲ್ಲಿ ಸಿಬಿಎಸ್‌ಸಿ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು.‌ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ.


ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ಮಾರ್ಚ್ 31ರಂದು ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಹಾಗೂ ಎಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದಲ್ಲಿ 100 ನಿಮಿಷಗಳ ಪರೀಕ್ಷೆ ನಡೆಯುತ್ತದೆ.‌ ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತದೆ. ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ. ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎಪ್ರಿಲ್ 10ರ ವರೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ವೆಬ್ ಸೈಟ್ https://scholarship.Alvas.org/PUC/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿಶೇಷ ಸೂಚನೆ:

ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜೊತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ.

ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ.

ಶೈಕ್ಷಣಿಕ- ಬೋಧನಾ ಭಿನ್ನತೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಜಗಜಾಂತರ, ಪ್ರಾದೇಶಿಕ ಭೇದಭಾವ, ಲಿಂಗ ತಾರತಮ್ಯ ಎಲ್ಲವನ್ನೂ ಮೀರಿ ಅರ್ಹ ಮಕ್ಕಳಿಗೆ ಅರ್ಹತೆಯ ಆಧಾರದಲ್ಲಿ ಅತ್ಯುನ್ನತ ಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರ ಮಹತ್ವಾಕಾಂಕ್ಷಿ ಸದಾಶಯದಂತೆ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶ ಪರೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ:8884477588/6366377827 ಅಥವಾ 6366377823 ಸಂಪರ್ಕಿಸಬಹುದು.


Ads on article

Advertise in articles 1

advertising articles 2

Advertise under the article