-->
ಮಂಗಳೂರು: ತಮಿಳುನಾಡಿನ ಮೂಲದ ಕಳ್ಳಿ ಅರೆಸ್ಟ್ - 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಮಂಗಳೂರು: ತಮಿಳುನಾಡಿನ ಮೂಲದ ಕಳ್ಳಿ ಅರೆಸ್ಟ್ - 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ


ಮಂಗಳೂರು: ಕಳೆದ ಒಂದುವರೆ ತಿಂಗಳಿನ ಹಿಂದೆ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮೂಲದ ಕಳ್ಳಿಯನ್ನು ಬಂಧಿಸಿ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಬಂಧಿತ ಆರೋಪಿತೆ.

ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅಂತಾರಾಜ್ಯ ಕಳ್ಳಿ ತಮಿಳುನಾಡು ಮೂಲದ  ಈಶ್ವರಿಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ಕಳವು ನಡೆಸಿದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article