ಸುಳ್ಯ: ರಸ್ತೆ ಅಪಘಾತಕ್ಕೆ ಶಿಕ್ಷಕ ಬಲಿ


ಸುಳ್ಯ: ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಪಾಲಡ್ಕ ಎಂಬಲ್ಲಿ ನಡೆದಿದೆ.

ಪದ್ಮನಾಭ ಮೃತಪಟ್ಟ ಶಿಕ್ಷಕ.

ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu