ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಕಾರು ಅಪಘಾತಕ್ಕೆ ಬಲಿ



ಶಿವಮೊಗ್ಗ: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. 

ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕುಲ್ಸುಂ (14) ಮೃತಪಟ್ಟ ವಿದ್ಯಾರ್ಥಿನಿ. ಉಮ್ಮೆ ಕುಲ್ಸುಂ ನಿನ್ನೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಬೇಕಾಗಿತ್ತು. ಹಾಗಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದಳು. ಅದರಂತೆ ರಸ್ತೆ ದಾಟುತ್ತಿದ್ದ ವೇಳೆ ಇನೋವಾ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.