ಮಂಗಳೂರು: ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ತಕ್ಷಣ ನಾಲ್ಕು ಲಕ್ಷ ಪರಿಹಾರ -ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಮಂಗಳೂರು: ಕಡಬದ ಕಾಲೇಜು ಆವರಣದೊಳಗೆ ನಿನ್ನೆ ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವಾನ ತಿಳಿಸಿದರು.




ಬಳಿಕ ಮಾತನಾಡಿದ ಅವರು, ಮೂವರೂ ಸಂತ್ರಸ್ತೆಯರು ಅಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತೆಯರಲ್ಲಿ ಒಬ್ಬಳು 20%, ಮತ್ತೊಬ್ಬಳು 12% ಹಾಗೂ 10%ಗಿಂತಲೂ ಕಡಿಮೆ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಒಂದು ವಾರಗಳು ಕಳೆದ ಬಳಿಕ ಇಬ್ಬರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತದೆ. ಮತ್ತೊಬ್ಬಳ ಗಾಯದ ಪರಿಸ್ಥಿತಿ ನೋಡಿ ಪ್ಲಾಸ್ಟಿಕ್ ಸರ್ಜರಿ ಮಾಡುವ ಬಗ್ಗೆ ಯೋಚನೆ ಮಾಡಲಾಗುತ್ತದೆ. ಸಂತ್ರಸ್ತೆಯರಿಗೆ ತಕ್ಷಣ ತಲಾ ನಾಲ್ಕು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.
BREAKING NEWS
Loading latest news...
Join our WhatsApp Channel Powered By : Online Pudu