ಮಂಗಳೂರು: ಕಳವು ಆರೋಪ ಹೊರಿಸಿ ಹೊರರಾಜ್ಯದ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ - ವೀಡಿಯೋ ವೈರಲ್
Friday, March 29, 2024
ಮಂಗಳೂರು: ಕಳವು ಆರೋಪ ಮಾಡಿ ಬಿಹಾರ ಮೂಲದ ಯುವಕನಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಸದ್ಯ ಘಟನೆಯ ವೀಡಿಯೋ ವೈರಲ್ ಆಗುತ್ತಿದೆ.
ಬಿಹಾರ ಮೂಲದ ಯುವಕ ಅರ್ಕುಳದ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಈತ ಆ ಮನೆಯಲ್ಲಿ ಕಳವುಗೈದಿರುವುದಾಗಿ ಮನೆಯವರು ಆರೋಪಿಸಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ. ಬೆಲ್ಟ್, ಚೇರ್ ಸೇರಿದಂತೆ ಸಿಕ್ಕಸಿಕ್ಕ ವಸ್ತಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಜೊತೆಯಲ್ಲಿರುವ ಮತ್ತೋರ್ವನಿಗೂ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಹಲ್ಲೆಯ ದೃಶ್ಯ ಅದೇ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈವರೆಗೆ ಪ್ರಕರಣ ದಾಖಲಾಗಿಲ್ಲ.