ಬಜ್ಪೆ: ದ್ವಿಚಕ್ರ ವಾಹನ ಕಳವು- ವಾಹನ ಸಹಿತ ಆರೋಪಿ ಅಂದರ್
Saturday, March 30, 2024
ಮಂಗಳೂರು: ದ್ವಿಚಕ್ರ ವಾಹನ ಕಳುವುಗೈಯುತ್ತಿದ್ದ ಅಸಾಮಿಯೊಬ್ಬನನ್ನು ಬಜ್ಪೆ ಪೊಲೀಸರು ಬಂಧಿಸಿ ಸುಮಾರು 1 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30) ಬಂಧಿತ ಆರೋಪಿ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 28ರಂದು ಬೆಳಗ್ಗೆ ಎಎಸ್ಸೈ ರಾಮ ಪೂಜಾರಿ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಪ್ರಹ್ಲಾದ್ ನನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ. ಆತನ ಬಳಿ ದ್ವಿಚಕ್ರ ವಾಹನದ ದಾಖಲೆ ಪತ್ರಗಳಿರಲಿಲ್ಲ. ಆದ್ದರಿಂದ ವಿಚಾರಣೆ ತೀವ್ರಗೊಳಿಸಿದಾಗ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿಂದ ವಾಹನವನ್ನು ಕಳವುಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯ ವಿರುದ್ಧ ಈಗಾಗಲೇ ಕುಂದಾಪುರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಕೋಟ, ಬ್ರಹ್ಮಾವರ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಳವಯ ಹಾಗೂ ಬೈಕ್ ಕಳವುಗೈದಿರುವ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಈ ಪ್ರಕರಣಗಳಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.