ಕಾಪು: ಮೀನುಗಾರಿಕೆಗೆಂದು ತೆರಳಿದ್ದ ಯುವಕನೋರ್ವನು ಮೀನಿನ ಬಲೆಗೆ ಸಿಲುಕಿಕೊಂಡು ಮೃತಪಟ್ಟಿರುವ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ನಡೆದಿದೆ.
ಕಿಶೋರ್ (29) ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದ ಕಿಶೋರ್, ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಅವರು ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದರು. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ದಡಕ್ಕೆ ಕಯಾಕ್ ಹಾಗೂ ಮೃತದೇಹವನ್ನು ತಂದಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.