ಪರೀಕ್ಷೆ ಬಳಿಕ ಗೋಬಿ ಮಂಚೂರಿ ನಿಷೇಧದ ಬಗ್ಗೆ ಮುಂದಿನ ಕ್ರಮ - ದಿನೇಶ್ ಗುಂಡೂರಾವ್‌


ಸುಳ್ಯ: ಗೋಬಿ ಮಂಚೂರಿ ನಿಷೇಧದ ಕುರಿತು ಪರೀಕ್ಷೆ ನಡೆಸುವಂತೆ ಹೇಳಲಾಗಿದೆ. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿ ಪರಿಶೀಲಿಸಿ ಯಾವ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗಾಗಲೇ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಬಗ್ಗೆ ಸ್ಪಷ್ಟತೆಯಿಲ್ಲ. ವರದಿ ನೋಡಿಕೊಂಡು ಏನು ಮಾಡಬೇಕೆಂದು ತಿಳಿಸುತ್ತೇವೆ ಎಂದರು.