-->

ಮಂಗಳೂರು: ಯಾವುದೇ ಕಾರಣಕ್ಕೂ ಈ ಬಾರಿ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ - ಸಚಿವ ಕೃಷ್ಣ ಬೈರೇಗೌಡ

ಮಂಗಳೂರು: ಯಾವುದೇ ಕಾರಣಕ್ಕೂ ಈ ಬಾರಿ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ - ಸಚಿವ ಕೃಷ್ಣ ಬೈರೇಗೌಡ


ಮಂಗಳೂರು: ಪಕ್ಷದ ಸೂಚನೆಯಂತೆ ಈ ಹಿಂದೆ ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಪರಾಜಿತನಾಗಿದ್ದೆ. ಆದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೂ ಸ್ಪರ್ಧಿಸೋಲ್ಲ ಎಂದು ಪಕ್ಷದ ವರಿಷ್ಠರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕೆಲವು ಕ್ಷೇತ್ರಗಳಲ್ಲಿ ಕೆಲವು ಸಚಿವರುಗಳು ಸ್ಪರ್ಧಿಸಿದರೆ ಲಾಭವಾಗುತ್ತದೆ ಅನ್ನುವ ಅಭಿಪ್ರಾಯವನ್ನು ಕಾರ್ಯಕರ್ತರು ಮುಖಂಡರು ವ್ಯಕ್ತಪಡಿಸಿದ್ದಾರೆ. ಆ್ರೆ ಯಾರು ಸ್ಪರ್ಧಿಸಬೇಕೆನ್ನುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಸಂಪುಟದಲ್ಲಿರುವ ಸಚಿವರುಗಳು ಸ್ಪರ್ಧೆ ಮಾಡಬೇಕೋ ಬೇಡವೋ ಎನ್ನುವುದನ್ನು ಸಿಎಂ ನಿರ್ಧರಿಸುತ್ತಾರೆ. ನನಗೆ ಮನಸಿಲ್ಲದಿದ್ದರೂ ಪಕ್ಷದ ಸೂಚನೆ ಮೇರೆಗೆ ಎರಡೂ ಬಾರಿ ಸ್ಪರ್ಧಿಸಿದ್ದೇನೆ. ಪದೇ ಪದೇ ಈ ರೀತಿ ಸೂಚನೆ ಒತ್ತಡ ನೀಡುವುದು ಸರಿಯಲ್ಲ. ಈಗಾಗಲೇ ಎಐಸಿಸಿ ಪ್ರತಿನಿಧಿಗಳಿಗೂ‌  ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.

ವಿಧಾನಸೌಧದಲ್ಲಿ‌ ಪಾಕ್ ಪರ‌ ಘೋಷಣೆ ಹಾಗೂ ಕೆಫೆ ಬಾಂಬ್ ಪ್ರಕರಣದ ತನಿಖೆಯ ವಿಚಾರದಲ್ಲಿ ಮಾತನಾಡಿದ ಅವರು, ಬಿಜೆಪಿ ಎಲ್ಲಾ ವಿಚಾರವನ್ನು ರಾಜಕೀಯಗೊಳಿಸುತ್ತಿದೆ. ಬಿಜೆಪಿಯವರು ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ವಾಸ್ತವಂಶ, ತನಿಖೆಯ ಆಧಾರದಲ್ಲಿ ಸರಕಾರ ಎಲ್ಲಾ ಕ್ರಮ ಕೈಗೊಳ್ಳುತ್ತದೆ. ಕಾನೂನು ವ್ಯವಸ್ಥೆ ಕಾಪಾಡಲು ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಈ ಘಟನೆಗಳು ಬಿಜೆಪಿಗೆ ಚುನಾವಣಾ ವಿಷಯವಾಗಬಹುದು. ಆದರೆ ನಮಗೆ ದೇಶದಲ್ಲಿ ಬೆಲೆ ಏರಿಕೆ , ನಿರುದ್ಯೋಗವೇ ಮುಂದಿನ ಚುನಾವಣೆಯ ವಿಚಾರ ಎಂದು ಕೃಷ್ಣ ಬೈರೇಗೌಡ ಹೇಳಿದರು.

Ads on article

Advertise in articles 1

advertising articles 2

Advertise under the article