-->

ಮಂಗಳೂರು: ಇಹಲೋಕದ ಯಾತ್ರೆ ಮುಗಿಸಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್

ಮಂಗಳೂರು: ಇಹಲೋಕದ ಯಾತ್ರೆ ಮುಗಿಸಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್


ಮಂಗಳೂರು: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕದ ಯಾತ್ರೆ ಮುಗಿಸಿದ್ದಾರೆ.

1984ರಲ್ಲಿ ಉದಯವಾಣಿಯ ಮಂಗಳೂರು ವರದಿಗಾರರಾಗಿ ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿದ ಇವರು ಬಳಿಕ ಪ್ರಧಾನ ವರದಿಗಾರರಾಗಿ, ಸುದ್ದಿ ವಿಭಾಗದ ಮುಖ್ಯಸ್ಥರಾಗಿ, ಸಹಾಯಕ ಸಂಪಾದಕರಾಗಿ ಸೇವೆಸಲ್ಲಿಸಿದ್ದರು. 2020ರಲ್ಲಿ ನಿವೃತ್ತಿ ಹೊಂದುವಲ್ಲಿಯವರೆಗೆ 36ವರ್ಷಗಳ ಕಾಲ ಉದಯವಾಣಿ ಒಂದೇ ಪತ್ರಿಕೆಯಲ್ಲಿ 36ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಮದರ್ ಥೆರೆಸಾ, ಅಮಿತಾ ಬಚ್ಚನ್, ಅಬ್ದುಲ್ ಕಲಾಂ, ಅಟಲ್ ಬಿಹಾರಿ ವಾಜಪೇಯಿ, ಡಾ.ರಾಜ್ ಕುಮಾರ್, ರಾಜೀವ ಗಾಂಧಿ, ಮೋಹನ್ ಲಾಲ್, ಮಮ್ಮುಟ್ಟಿ, ಐಶ್ವರ್ಯಾ ರೈ ಮುಂತಾದ ಲೆಜೆಂಡ್ರಿಗಳನ್ನು ವಿಶೇಷ ಸಂದರ್ಶನ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ.

ಅವಿವಾಹಿತರಾಗಿದ್ದ ಇವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ತುಳು, ಕೊಂಕಣಿ,ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಮೂರು ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ನಿರೂಪಣೆ, ತಾಳಮದ್ದಳೆ ಅರ್ಥಧಾರಿ, ಕ್ರಿಕೆಟ್‌ ಆಟಗಾರ, ಕ್ರಿಕೆಟ್ ವೀಕ್ಷಕ ವಿವರಕ, ಕತೆ-ಕಾದಂಬರಿಕಾರ, ಅಂಕಣಗಾರ ಹೀಗೆ ವಿವಿಧ ಮಜಲುಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿದವರು‌. ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅರಸಿ ಬಂದಿತ್ತು.

Ads on article

Advertise in articles 1

advertising articles 2

Advertise under the article