-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಶ್ವ ಕಿರೀಟ ಮುಡಿಗೇರಿಸಿಕೊಂಡ ಜೆಕ್ ಗಣರಾಜ್ಯ ಸುಂದರಿ ಕ್ರಿಸ್ಟಿನಾ ಪಿಸ್ಕೋವಾ - ಕನ್ನಡತಿ ಸಿನಿ ಶೆಟ್ಟಿಗೆ ನಿರಾಸೆ

ವಿಶ್ವ ಕಿರೀಟ ಮುಡಿಗೇರಿಸಿಕೊಂಡ ಜೆಕ್ ಗಣರಾಜ್ಯ ಸುಂದರಿ ಕ್ರಿಸ್ಟಿನಾ ಪಿಸ್ಕೋವಾ - ಕನ್ನಡತಿ ಸಿನಿ ಶೆಟ್ಟಿಗೆ ನಿರಾಸೆ


ಮುಂಬೈ (ಮಹಾರಾಷ್ಟ್ರ): ಕಳೆದ 28ವರ್ಷಗಳ ಭಾರತದಲ್ಲಿ ಬಳಿಕ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಸಾಲಿನ 'ವಿಶ್ವ ಸುಂದರಿ' ಕಿರೀಟವಮ್ನು ಮುಡಿಗೇರಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ಸುಂದರಿ ಮತ್ತು ಕನ್ನಡತಿ ಸಿನಿ ಶೆಟ್ಟಿ ಟಾಪ್‌ ನಾಲ್ಕರಲ್ಲಿ ಸ್ಥಾನ ಪಡೆಯಲು ವಿಫಲವಾಗಿ ನಿರಾಸೆ ಹೊಂದಿದ್ದಾರೆ.




ಶನಿವಾರ ರಾತ್ರಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪೋಲೆಂಡ್‌ನ ವಿಶ್ವ ಸುಂದರಿ ಕರೋಲಿನಾ ಬಿಲಾಸ್ಕಾ ವಿಶ್ವ ಸುಂದರಿ ಕಿರೀಟವನ್ನು ಕ್ರಿಸ್ಟಿನಾ ಅವರಿಗೆ ತೊಡಿಸಿದರು. ಲೆಬನಾನ್ ಸುಂದರಿ ಯಾಸ್ಮಿನಾ ಜೈಟೌನ್ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. 71ನೇ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವದ 112 ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು.




ಭಾರತ ಸುಂದರಿ ಪ್ರಶಸ್ತಿ ವಿಜೇತೆ, ಕನ್ನಡತಿ 22 ವರ್ಷದ ಸಿನಿ ಶೆಟ್ಟಿ ವಿಶ್ವ ಸುಂದರಿ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಿದ್ದರು. ಟಾಪ್ 4 ಸುಂದರಿಯರ ಆಯ್ಕೆಯಲ್ಲಿ ಲೆಬನಾನ್‌ನ ಯಾಸ್ಮಿನಾ ಜೈಟೌನ್ ಎದುರು ಅವರು ಸೋತಿದ್ದಾರೆ. ದೇಶದಲ್ಲೇ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಟಾಪ್ 4ರಲ್ಲಿ ಯಾವೊಬ್ಬ ಭಾರತೀಯ ಸುಂದರಿ ಕಾಣಿಸಿಕೊಳ್ಳದೇ ಇರುವುದು ಅಭಿಮಾನಿಗಳಿಗೆ ನಿರಾಸೆ ತರಿಸಿದೆ.

ಕೊನೆಯ ಸ್ಪರ್ಧೆಗೆ ಜ್ಯೂರಿಯಾಗಿ ನಿರ್ಮಾಪಕ ಸಾಜಿದ್‌ ನಾಡಿಯಾಡ್ವಾಲಾ, ನಟಿಯರಾದ ಕೃತಿ ಸನೋನ್, ಪೂಜಾ ಹೆಗ್ಡೆ, ಕ್ರಿಕೆಟಿಗ ಹರ್ಭಜನ್ ಸಿಂಗ್, ಪತ್ರಕರ್ತ ರಜತ್ ಶರ್ಮಾ, ಸಮಾಜ ಸೇವಕಿ ಅಮೃತಾ ಫಡ್ನವಿಸ್, ಉದ್ಯಮಿ ವಿನೀತ್ ಜೈನ್, ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮೊರ್ಲೆ, ಮಿಸ್ ವರ್ಲ್ಡ್ ಇಂಡಿಯಾ ಆಯೋಜಕರಾದ ಜಮಿಲ್ ಸೈದಿ, ಮಾಜಿ ವಿಶ್ವಸುಂದರಿ ಮಾನುಷಿ ಚಿಲ್ಲರ್ ಸೇರಿದಂತೆ ಇನ್ನಿಬ್ಬರು ಮಾಜಿ ವಿಶ್ವ ಸುಂದರಿಯರು ಇದ್ದರು. ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಮತ್ತು ಮಾಜಿ ವಿಶ್ವ ಸುಂದರಿ ಮೇಗನ್ ಯಂಗ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಗಾಯಕರಾದ ಶಾನ್, ನೇಹಾ ಕಕ್ಕ‌ರ್ ಮತ್ತು ಟೋನಿ ಕಕ್ಕ‌ರ್ ಅದ್ಭುತ ಪ್ರದರ್ಶನ ನೀಡಿದರು.

 

Ads on article

Advertise in articles 1

advertising articles 2

Advertise under the article

ಸುರ