-->
ಬಂಟ್ವಾಳ: ಚುನಾವಣೆಯ ಕರ್ತವ್ಯದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ನಾಪತ್ತೆ - ಪತ್ನಿಯಿಂದ ದೂರು

ಬಂಟ್ವಾಳ: ಚುನಾವಣೆಯ ಕರ್ತವ್ಯದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ನಾಪತ್ತೆ - ಪತ್ನಿಯಿಂದ ದೂರು




ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಕರ್ತವ್ಯಕ್ಕೆ ಹಾಜರಾಗದೆ ನಾಪತ್ತೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾಮದ ಕೊಲ್ಪೆದಬೈಲು ನಿವಾಸಿ, ಅಮ್ಟಾಡಿ ಗ್ರಾಂಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ(52) ಎಂಬವರು ನಾಪತ್ತೆಯಾದವರು. 

ಲಕ್ಷ್ಮೀನಾರಾಯಣರವರು ಸುಮಾರು 6 ವರ್ಷಗಳಿಂದ ಅಮ್ಟಾಡಿ ಗ್ರಾಪಂನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು‌. ಮಾ.27 ರಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದ ಅವರು ಕರ್ತವ್ಯಕ್ಕೂ ಹಾಜರಾಗದೆ ಮನೆಗೂ ಮರಳದೆ ನಾಪತ್ತೆಯಾಗಿದ್ದಾರೆ.‌ ಅವರ ಫೋನ್ ಸ್ವಿಚ್‌ ಕೂಡಾ ಆಫ್ ಆಗಿದ್ದು ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ. ತಂಡದಲ್ಲಿ ಲಕ್ಷ್ಮೀನಾರಾಯಣ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಮಾ.27ರಂದು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ಇತರ ಸಿಬ್ಬಂದಿ ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಕೆಲವು ಸಮಯಗಳ ಹಿಂದೆ ಕೂಡ ಇದೇ ರೀತಿ ಅವರು ನಾಪತ್ತೆಯಾಗಿದ್ದರು. ಬಳಿಕ ಪೋಲೀಸರು ಪತ್ತೆ ಹಚ್ಚಿದ್ದರು. ಇದೀಗ ಅವರ ಬೈಕ್ ಮತ್ತು ಮೊಬೈಲ್ ಫೋನ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ ಎನ್ನಲಾಗುತ್ತಿದೆ‌. ಆದ್ದರಿಂದ ಲಕ್ಷ್ಮೀನಾರಾಯಣ ಅವರಿಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article