ಪ್ರೀತಿ ನಿರಾಕರಿಸಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಹತ್ಯೆಗೈದು ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ
Tuesday, March 5, 2024
ಹಾಸನ: ಪ್ರೀತಿ ನಿರಾಕರಣೆ ಮಾಡಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಹತ್ಯೆ ಮಾಡಿದ ಯುವಕನೋರ್ವನು ಆ ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ವಿದ್ಯಾರ್ಥಿನಿ ಶಾಲೆ ಮುಗಿಸಿ ಮನೆಗೆ ಹೋಗುವ ವೇಳೆ ದಾರಿಗಡ್ಡ ಕಟ್ಟಿದ ಶರತ್ ಎಂಬ ಯುವಕ ಚಾಕುವಿನಿಂದ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿ ಚಲಿಸುವ ರೈಲಿನಡಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ರೈಲ್ವೆ ಪೊಲೀಸರು ಯುವಕನ ಮೃತದೇಹ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.