-->

ಮಂಗಳೂರು: ಆರು ತಿಂಗಳ ಮೊದಲು ದ.ಕ.ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬದಲಾವಣೆಗೆ ಒಪ್ಪಿಗೆ ನೀಡಿದ್ದೆ - ನಳಿನ್

ಮಂಗಳೂರು: ಆರು ತಿಂಗಳ ಮೊದಲು ದ.ಕ.ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬದಲಾವಣೆಗೆ ಒಪ್ಪಿಗೆ ನೀಡಿದ್ದೆ - ನಳಿನ್


ಮಂಗಳೂರು: ದ.ಕ.ಜಿಲ್ಲೆಯಲ್ಲಿ ಪರಿವರ್ತನೆಗೆ ಅವಕಾಶವಿದ್ದು, ಹೊಸಬರಿಗೆ ಅವಕಾಶ ಕೊಡುವುದಾದಲ್ಲಿ ನನ್ನಿಂದ ಅಡ್ಡಿಯಿಲ್ಲ ಎಂದು ಆರು ತಿಂಗಳ ಮೊದಲೇ ಪಕ್ಷದ ಹಿರಿಯರಿಗೆ ತಿಳಿಸಿದ್ದೆ ಎಂದು ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರನ್ನು 3ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಕರೆ ನೀಡಿದರು.

ಬಿಜೆಪಿ ನನಗೆ 15 ವರ್ಷಗಳ ದೊಡ್ಡ ಅವಕಾಶ ಕೊಟ್ಟಿದೆ.  ಈ ಕ್ಷೇತ್ರದ ಸಂಸದನಾಗಲು ಪಕ್ಷದ ಹಿರಿಯರು ಅವಕಾಶ ಕೊಟ್ಟಿದ್ದಾರೆ. ನನ್ನನ್ನು ಕಾರ್ಯಕರ್ತರು ಆಹೋರಾತ್ರಿ  ದುಡಿದು ಗೆಲ್ಲಿಸಿದ್ದಾರೆ. ಕ್ಷೇತ್ರದ ಮತದಾರರು ಗೆಲ್ಲಿಸಿ  ಆಶೀರ್ವಾದ ಮಾಡಿದ್ದಾರೆ. ನಾನು ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ. ಕ್ಷೇತ್ರಕ್ಕೆ 1 ಲಕ್ಷ ಕೋಟಿ ಅನುದಾನವನ್ನು ತಂದಿದ್ದೇನೆ ಎಂದರು.

ನಾಲ್ಕೂವರೆ ವರ್ಷ ರಾಜ್ಯಾಧ್ಯಕ್ಷನಾಗಿದ್ದಾಗ ಕಾರ್ಯಕರ್ತರು, ಜನರು ಸಹಕಾರ ಕೊಟ್ಟಿದ್ದಾರೆ. ಈ ಕ್ಷೇತ್ರದಲ್ಲಿ ಅತೀ ಹೆಚ್ಚು ಕಾಲ ಸಂಸದನಾಗಿ ಕೆಲಸ ಮಾಡಿದ್ದೇನೆ. ನನಗೆ ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಬಿಜೆಪಿ ಕಾರ್ಯಕರ್ತನಾಗಿ ಪಕ್ಷ ಹೇಳಿದ ಕೆಲಸ ಮಾಡುತ್ತೇನೆ. ಮೋದಿ ಪ್ರಧಾನಿಯಾಗಲು ಬ್ರಜೇಶ್ ಚೌಟ ಅವರಿಗೆ ಎಲ್ಲರೂ ಬೆಂಬಲಿಸಬೇಕು ಎಂದು‌ ನಳಿನ್ ಕುಮಾರ್ ಹೇಳಿದರು.

Ads on article

Advertise in articles 1

advertising articles 2

Advertise under the article