-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಿಸಿಲಿನ ತಾಪಕ್ಕೆ ಹೆಚ್ಚಾದ  ಕಾಯಿಲೆಗಳು ಮುನ್ನೆಚ್ಚರಿಕೆ ಅಗತ್ಯ

ಬಿಸಿಲಿನ ತಾಪಕ್ಕೆ ಹೆಚ್ಚಾದ ಕಾಯಿಲೆಗಳು ಮುನ್ನೆಚ್ಚರಿಕೆ ಅಗತ್ಯ


 
  ರಾಜ್ಯದಲ್ಲಿ ಗರಿಷ್ಠ ಉಷ್ಣತೆಯ  ತಾಪ 40 ಡಿಗ್ರಿ ಅಷ್ಟು  ಮುಂದುವರೆದಿದ್ದೆ. ಅತಿಯಾದ ಬಿಸಿಲಿನ ಪರಿಣಾಮ ಸನ್ ಸ್ಪೋಕ್, ಮೈಗ್ರೇನ್, ಮೂಗಿನಲ್ಲಿ ರಕ್ತಸ್ರಾವದಂತಹ ಸಮಸ್ಯೆಗಳು  ಹೆಚ್ಚಾಗಿದೆ.
ವಾತಾವರಣತಾದಿಂದ ಕೂಡಿರುವುದರಿಂದ ಬ್ಯಾಕ್ಲೀರಿಯಾ, ವೈರಸ್ ಗಳು  ಹರಡುವ ಮೂಲಕ ಹಲವರು ಅನಾರೋಗ್ಯಕ್ಕೆ  ಒಳಗಾಗುವರ ಸಂಖ್ಯೆ ಹೆಚ್ಚಿದೆ
ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸನ್ ಸ್ಟೋಕ್, ಮೈಗ್ರೇನ್, ಚರ್ಮದ ಸಮಸ್ಯೆಗಳ ಜತೆಗೆ ಟೈಫಾಯ್ಡ್ ಸೇರಿದಂತೆ ವಿವಿಧ ಜ್ವರದ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ.
ಮನುಷ್ಯನ ದೇಹದ ಸಾಮಾನ್ಯ ಉಷ್ಣತೆಯು 36.4 ಡಿಗ್ರಿಯಿಂದ 37.2 ಡಿಗ್ರಿ, ಸೆಲ್ಸಿಯಸ್ (97.5 20 98.9 2) . ಒಳಾಂಗಣ ಹಾಗೂ ಹೊರಾಂಗಣ ಪ್ರದೇಶದಲ್ಲಿ ಇದಕ್ಕಿಂತ ಹೆಚ್ಚಿನ ಉಷ್ಣತೆಯಿದ್ದರೆ ಅನಾರೋಗ್ಯ ಸಮಸ್ಯೆ ಉಂಟಾಗುತ್ತದೆ.
ಇದೀಗ, ರಾಜ್ಯಾದ್ಯಂತ ತೀವ್ರ ಬಿಸಿಲಿನಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹಾಗೂ ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿದೆ. ಕರಳುಬೇನೆ, ನಿರ್ಜಲೀಕರಣ, ಮೂಗಿನಲ್ಲಿ ರಕ್ತಸ್ರಾವ, ವಾಂತಿ-ಭೇದಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇವುಗಳ ಜತೆಗೆ ಕಣ್ಣಿನ ತೊಂದರೆ, ಮಕ್ಕಳನ್ನು ಬಾಧಿಸುವ ಚಿಕನ್ ಫಾಕ್ಸ್, ಟೈಫಾಯ್ಡ್ ಜ್ವರ, ಬಿಸಿಲಿನಿಂದ ತಲೆ ಸುತ್ತು, ಸನ್ ಸ್ಟೋಕ್, ಮೈಗ್ರೇನ್, ಅತಿಯಾದ ಸೂರ್ಯ ಕಿರಣಗಳಿಂದ ಚರ್ಮದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ.

ಉಷ್ಣದಿಂದ ಪಾರಾಗಲು ಹೀಗೆ ಮಾಡಿ
1 ಬೆವರಿನಿಂದ ದೇಹದಲ್ಲಿ ತೇವಾಂಶ ಕಡಿಮೆಯಾಗಿ ಅನಾರೋಗ್ಯ ಉಂಟಾಗುತ್ತದೆ. ಹೀಗಾಗಿ ನೀರಿನ ಜತೆಗೆ, ದೇಹಕ್ಕೆ ಶಕ್ತಿ, ಚೈತನ್ಯ ತುಂಬುವಂತಹ ಹಣ್ಣಿನ ರಸ, ಓಆರ್‌ಎಸ್ ಕುಡಿಯಬೇಕು.
2 ಬೇಸಿಗೆಗೆ ಕಾಟನ್ ಉಡುಪು ಧರಿಸುವುದು, ಬಿಸಿಲಿಗೆ ಹೋಗುವಾಗ ತಂಪು ಕನ್ನಡಕ (ಕೂಲಿಂಗ್ ಗ್ಲಾಸ್), ಛತ್ರಿ ಬಳಕೆ, ಅಗತ್ಯ ಪ್ರಮಾಣದ ನೀರು ಕೊಂಡೊಯ್ಯುವಂತಹ ಸಾಮಾನ್ಯ ಕ್ರಮ ಪಾಲಿಸಬೇಕು.
3 ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಆಚೆ ತೆರಳಬೇಕು. ಬಿಸಿಲು ಏರುವುದರೊ ಳಗೆ ಕೆಲಸ ಮಾಡಿಕೊಂಡು ಮನೆ ಸೇರಿಕೊಳ್ಳಬೇಕು. ಮನೆಯಲ್ಲಿದ್ದರೂ, ನೆರಳು ಇರುವ ಕಡೆ, ಚೆನ್ನಾಗಿ ಗಾಳಿ ಬೀಸುವ ಜಾಗದಲ್ಲಿ ಇರಬೇಕು.
4  ಮಕ್ಕಳನ್ನು ಜೋಪಾನ ಮಾಡಬೇಕು. ಗರ್ಭಿಣಿ ಸ್ತ್ರೀಯರು, ಹೊರಗಡೆ ಹೆಚ್ಚು ಕೆಲಸ ಮಾಡುವಂಥವರು, ಮಾನಸಿಕವಾಗಿ ಸಮಸ್ಯೆಗಳು ಇರುವಂಥವರು, ಹೃದಯದ ಸಮಸ್ಯೆಗಳು ಇರುವಂಥವರು, ರಕ್ತದೊತ್ತಡ ಇರುವಂಥವರು ಆದಷ್ಟೂ ಜಾಗ್ರತೆಯಾಗಿ ಇರಬೇಕು. ಆರೋಗ್ಯದ ಮೇಲೆ ಗಮನ ಹರಿಸಿ 

Ads on article

Advertise in articles 1

advertising articles 2

Advertise under the article

ಸುರ