ಮಂಗಳೂರು: ಇಹಲೋಕ ತ್ಯಜಿಸಿದ ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು
Sunday, March 31, 2024
ಮಂಗಳೂರು: ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಪ್ರಕಾಶ್ ಹೆಗ್ಗೋಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ರಂಗಭೂಮಿ ಕಲಾವಿದರಾಗಿ, ಚಿತ್ರನಟರಾಗಿ, ಸಂಘಟಕರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಏಸು ಪ್ರಕಾಶ್ ಕಲ್ಲುಕೊಪ್ಪ ( ಪ್ರಕಾಶ್ ಹೆಗ್ಗೋಡು) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9ರಿಂದ ಕಲ್ಲುಕೊಪ್ಪದ (ಪುರಪ್ರೇಮನೆ) ಅವರ ಸ್ವಗೃಹದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಕುಟುಂಬಸ್ಥರು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ. ಪ್ರಕಾಶ್ ಹೆಗ್ಗೋಡು ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಖಳನಟನಾಗಿ ಖ್ಯಾತಿ ಗಳಿಸಿದ್ದ ನಟ ಪ್ರಕಾಶ್ ಹೆಗ್ಗೋಡು ಅವರು ಕನ್ನಡದ ಕಿರಾತಕ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದರು.