ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ನನ್ನ ಪತ್ನಿ ಶಾಸಕಿ- ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ : ಶಿವರಾಜ್ ಕುಮಾರ್


ಶಿವಮೊಗ್ಗ: ಓರ್ವ ಪತಿಯಾಗಿ ನನ್ನ ಪತ್ನಿ ಶಾಸಕಿ- ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾ‌ರ್ ಈಗಾಗಲೇ ಸಮಾಜ ಸೇವೆಯಲ್ಲಿ ಗುರುಸಿಕೊಂಡಿದ್ದಾರೆ. ಅವರು ಶಾಸಕಿ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಫೂರ್ತಿ ದೊರೆಯಲಿದೆ. ಅದಕ್ಕಾಗಿ ಜನಪ್ರತಿನಿಧಿಯಾಬೇಕೆಂಬ ಆಶಯವಿದೆ ಎಂದರು.

ಗೀತಾ ಶಿವರಾಜಕುಮಾ‌ರ್ ಅವರನ್ನು ಓರ್ವ ಸೆಲೆಬ್ರಿಟಿಯಾಗಿ ನೋಡುವ ಅಗತ್ಯವಿಲ್ಲ. ಸಮಾಜ ಸೇವೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದಾರೆ. ರಾಜಕೀಯ ಕುಟುಂಬದಿಂದ ಆಕೆ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ ಎಂದರು.

ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಅವಕಾಶ ಸಿಗದಿದ್ದರೆ ಬೇಸರವಿಲ್ಲ. ನಾವು ಯಾವುದಕ್ಕೂ ಸಿದ್ಧರಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ನಾನು ಬರುತ್ತೇನೆ. ಸಿನಿಮಾ ಚಿತ್ರೀಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ. ನಾನು ಸಿನಿಮಾರಂಗದಲ್ಲಿ ಇರುವುದರಿಂದ ಚುನಾವಣೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.