-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಿಸಿಲಿನ ತಾಪ ಹೆಚ್ಚಾದಂತೆ  ಹಾವುಗಳ ಕಾಟ ಹೆಚ್ಚು ,ಮನೆ ಬಳಿ ಹಾವುಗಳು ಸುಳಿಯದಂತೆ ಓಡಿಕೊಳ್ಳುವುದು ಹೇಗೆ

ಬಿಸಿಲಿನ ತಾಪ ಹೆಚ್ಚಾದಂತೆ ಹಾವುಗಳ ಕಾಟ ಹೆಚ್ಚು ,ಮನೆ ಬಳಿ ಹಾವುಗಳು ಸುಳಿಯದಂತೆ ಓಡಿಕೊಳ್ಳುವುದು ಹೇಗೆ


ಬೇಸಿಗೆ ಕಾಲ ಬಂತು ಅಂದರೆ ತಂಪಿನ ವಾತಾವರಣ ಹುಡುಕಿ  ಹಾವುಗಳು ಜನವಸತಿ ಪ್ರದೇಶಗಳತ್ತ ಬರುವುದು ಸಾಮಾನ್ಯ.

 ಅತಿಯಾದ ಬಿಸಿಲಿನ ಧಗೆ ಇರುವುದರಿಂದ ದೇಹವನ್ನು ತಂಪಾಗಿ ಇಡಲು ತಂಪು ಸ್ಥಳಗಳನ್ನು ಹುಡುಕಿಕೊಂಡು ಬರುತ್ತವೆ.ಮಕ್ಕಳಿರುವ ಮನೆಯಲ್ಲಿ ಹಾವಿನ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು. 

ಸ್ವಲ್ಪ ಜಾಗವಿದ್ದರೂ ಸಾಕು ಹಾವು ಸುಲಭವಾಗಿ ಮನೆಯೊಳಗೆ ಪ್ರವೇಶ ಮಾಡುತ್ತದೆ. ಕೆಲವರು ಹಾವನ್ನು ನೋಡುತ್ತಿದ್ದಂತೆ ಮೊದಲು ಮಾಡುವ ಕೆಲಸವೆಂದರೆ, ಬೆಳ್ಳುಳ್ಳಿಯನ್ನು ಜಜ್ಜಿ ನೀರಿನೊಂದಿಗೆ ಮಿಶ್ರಣ ಮಾಡಿ ಹಾವಿನ ಸುತ್ತಮುತ್ತ ಸಿಂಪಡಿಸುತ್ತಾರೆ. ಹೀಗೆ ಮಾಡಿದರೆ ಹಾವು ಹತ್ತಿರ ಬರುವುದಿಲ್ಲ ಎಂಬ ನಂಬಿಕೆ ಇದೆ ಆದರೆ ಪ್ರಯೋಜನ ಆಗುವುದಿಲ್ಲ. ಏಕೆಂದರೆ, ಬೆಳ್ಳುಳ್ಳಿ ಮತ್ತು ಹಾವಿನ ನಡುವೆ ಯಾವುದೇ ಸಂಪರ್ಕ ಇಲ್ಲ. ಆದರೆ, ಸೀಮೆಎಣ್ಣೆ ಮತ್ತು ನೀರು ಕೆಲಸ ಮಾಡುತ್ತದೆ. ಇದನ್ನು ನಾನು ಪ್ರಯತ್ನಿಸಿದ್ದೇನೆ ಎಂದು ವಾವಾ ಸುರೇಶ್ ಹೇಳಿದ್ದಾರೆ.

ಶೇ. 95 ರಷ್ಟು ಹಾವುಗಳು ಇತರೆ ಹಾವುಗಳು ಪ್ರಯಾಣ ಮಾಡಿದ ಹಾದಿಯಲ್ಲಿ ಸಂಚರಿಸುತ್ತವೆ.
 ಇಲಿಯ ಮೂತ್ರದ ವಾಸನೆಯನ್ನು ಹಾವು ತನ್ನ ನಾಲಿಗೆಯಿಂದ ಪತ್ತೆ ಮಾಡುತ್ತದೆಆದರೆ ಸೀಮೆಎಣ್ಣೆ ಸಿಂಪಡಿಸಿದ ನಂತರ ಹಾವಿಗೆ ವಾಸನೆ ತಿಳಿಯುವುದಿಲ್ಲ.

ಬೇಸಿಗೆ ಕಾಲದಲ್ಲಿ ಹಾವುಗಳು ತಂಪಾದ ಸ್ಥಳ ಅರಸಿ ಬರುವುದರಿಂದ ನಿಮ್ಮ ದೈನಂದಿನ ಜೀವನವನ್ನು ತೊಂದರೆಗೀಡುಮಾಡುವ ಸಾಧ್ಯತೆಯಿದೆ. ಹಾಗಾಗಿ ನೀವು ಕೆಲವೊಂದು ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳುವುದು ತುಂಬಾ ಒಳ್ಳೆಯದು. ಆ ಕ್ರಮಗಳು ಈ ಕೆಳಕಂಡಂತಿವೆ.

1. ಮನೆ ಬಳಿ ಕಸದ ರಾಶಿ ಹಾಕಬೇಡಿ. 
2. ಮನೆ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ. ನೆರಳು ಮತ್ತು ತಂಪು ನೀಡುವ ವಸ್ತುಗಳನ್ನು ಮನೆಯ ಹೊರಗೆ ಸಂಗ್ರಹಿಸಿ ಇಡಬೇಡಿ. 
3.ಮನೆಯೊಳಗೆ ಸ್ವಚ್ಛತೆ ಇರಲಿ.
3. ಶೂಗಳನ್ನು  ಪರಿಶೀಲಿಸಿ  ಧರಿಸಿ
4. ರಾತ್ರಿಯ ವೇಳೆ ತುಂಬಾ ಎಚ್ಚರಿಕೆಯಿಂದ ನಡೆಯಿರಿ. ಬ್ಯಾಟರಿ ಅಥವಾ ಮೊಬೈಲ್ ಟಾರ್ಚ್ ಬಳಸುವುದು ಉತ್ತಮ.
5. ಹಾವು ಕಡಿತಕ್ಕೆ ಒಳಗಾಗುವ ವ್ಯಕ್ತಿಯನ್ನು ನೋಡಿ ಭಯಪಡದೇ ಸಾಧ್ಯವಾದಷ್ಟು ಬೇಗ ಅವರನ್ನು ಆಸ್ಪತ್ರೆಗೆ ದಾಖಲಿಸಿ.

ಎಲ್ಲಿಯೇ ಆಗಲಿ ಹಾವುಗಳನ್ನು ಕಂಡಾಗ ಮೊದಲ ಉರಗ ಪ್ರೇಮಿಗಳಿಗೆ ಕರೆ ಮಾಡಿ. 
ಹಾವುಗಳನ್ನು ಯಾವುದೇ ಕಾರಣಕ್ಕೂ ಸಾಯಿಸಬೇಡಿ. ಉರಗ ಪ್ರೇಮಿಗಳು ಬಂದು ಹಾವನ್ನು ರಕ್ಷಣೆ ಮಾಡಿ, ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬರುತ್ತಾರೆ.

Ads on article

Advertise in articles 1

advertising articles 2

Advertise under the article

ಸುರ