ಪುತ್ತೂರು: ಅಪಪ್ರಚಾರಕ್ಕೆ ಮನನೊಂದು ಯುವತಿ ಆತ್ಮಹತ್ಯೆಗೆ ಶರಣು
Monday, March 4, 2024
ಪುತ್ತೂರು: ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
ಕಾಣಿಯೂರು ಗ್ರಾಮದ ನಿವಾಸಿ ದಿವ್ಯಶ್ರೀ(26) ಆತ್ಮಹತ್ಯೆ ಮಾಡಿಕೊಂಡ ಯುವತಿ.
ದಿವ್ಯಶ್ರೀ ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಆತ್ಮಹತ್ಯೆಗೈದಿರುವುದನ್ನು ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ದಿವ್ಯಶ್ರೀ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಅಪಪ್ರಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.