-->
1000938341
Ullal- ಡಿವೈಡರಿಗೆ ಬೈಕ್ ಡಿಕ್ಕಿ, ಯುವತಿ ಮೃತ್ಯು

Ullal- ಡಿವೈಡರಿಗೆ ಬೈಕ್ ಡಿಕ್ಕಿ, ಯುವತಿ ಮೃತ್ಯು



ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹ ಸವಾರೆ ಸಾವನ್ನಪ್ಪಿದ ಘಟನೆ ಉಳ್ಳಾಲದ ನಾಟೆಕಲ್ ಬಳಿ ನಡೆದಿದೆ.


ಮಂಗಳೂರು ನಗರದ ಬೋಂದೇಲ್ ನಿವಾಸಿ ಶ್ರೀನಿಧಿ (29) ಮೃತ ದುರ್ದೈವಿ ಯುವತಿ. ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ದುರ್ಘಟನೆ ನಡೆದಿದೆ. ಇನ್ನು ಮೃತ ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ, ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article