ಅನಾಗರಿಕ ಮಾನವನ ಕೆಲಸದಿಂದ ಪ್ರಾಣಿಗಳ
ಜೀವಕ್ಕೆ ಕುತ್ತುತರುತ್ತಿದೆ ಪ್ಲಾಸ್ಟಿಕ್ ಇತ್ತೀಚೆಗೆ ಜಲಚರಗಳಿಗೂ ಕಂಟಕವಾಗುತ್ತಿದೆ.
ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವು!
ಕಡಬ ಸಮೀಪದ ಕೊಡಿಂಬಾಳ ಗ್ರಾಮದ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್ ಕಾರಣ ಎಂಬವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ. ಪ್ಲಾಸ್ಟಿಕ್‌ನಲ್ಲಿದ್ದ ತ್ಯಾಜ್ಯ ಅಜೀರ್ಣ ವಾದದ್ದು ಮೊಸಳೆಯ ಸಾವಿಗೆ ಕಾರಣವಾಯಿತೇ ಅಥವಾ ಪ್ಲಾಸ್ಟಿಕ್ ಕಾರಣವಾಯಿತೇ ಎಂಬುದು ಇನ್ನಷ್ಟು ತನಿಖೆಯಿಂದ ಹೊರಬರಬೇಕಿದೆ.
ಪ್ಲಾಸ್ಟಿಕ್ ಹಾಗೂ ತ್ಯಾಜ್ಯಕ್ಕೆ ಮೊಸಳೆ ಬಲಿ!
ಈ ವಿಚಾರ ನಿಜಕ್ಕೂ ಆತಂಕಕಾರಿಯಾಗಿದ್ದು, ಇದೇ ಪ್ರಥಮ ಬಾರಿಗೆ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ಸೇವನೆಯಿಂದ ಮೊಸಳೆ ಸತ್ತ ಪ್ರಕರಣ ಇದಾಗಿದೆ.
ಶುಕ್ರವಾರ ಬೆಳಗ್ಗೆ ಪತ್ತೆಯಾದ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ.ಅಜಿತ್ ಅವರು ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ. ಅಜಿತ್ ನಡೆಸಿದರು. ಈ ಸಂದರ್ಭದಲ್ಲಿ ಮೊಸಳೆ ಹೊಟ್ಟೆಯಲ್ಲಿ ಮಕ್ಕಳಿಗೆ ಬಳಸುವ ಪ್ಯಾಡ್ ಮಕ್ಕಳಿಗೆ ಬಳಸುವ ಪ್ಯಾಡ್ ಸೇರಿ ಹಲವು ತ್ಯಾಜ್ಯ ಪತ್ತೆಯಾಗಿದೆ. ಮೊಸಳೆಗಳು ಕೂಡಾ ಅಳಿವಿನಂಚಿನಲ್ಲಿರುವ ಜೀವಿಗಳ ವರ್ಗಕ್ಕೆ ಸೇರುವುದರಿಂದ ಇನ್ನಾದರೂ ನೀರಿನ ಮೂಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸುವುದು ಒಳಿತು
ಮೊದಲೂ ಮಾನವನಗಬೇಕು..