ಕಾರ್ಕಳ: 13 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ - ಮುಖ್ಯೋಪಾಧ್ಯಾಯ, ದೇವಾಲಯದ ಅರ್ಚಕ ಅರೆಸ್ಟ್


ಕಾರ್ಕಳ: ಬರೋಬ್ಬರಿ 13 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬೋಳ ಗ್ರಾಮದ ಪಿಲಯೂರು ಸ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ದೇವಳವೊಂದರ ಪ್ರಧಾನ ಅರ್ಚಕ ಕಾರ್ಕಳ ಗ್ರಾಮಾಂತರ ಪೊಲೀಸರು ಎ.6ರಂದು ಬಂಧಿಸಿದ್ದಾರೆ.

ಬೋಳ ವಂಜಾರಕಟ್ಟೆ ನಿವಾಸಿ, ಇಷ್ಟೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ.

ರಾಜೇಂದ್ರ ಆಚಾರ್ಯ ಶಾಲೆಯ 13 ವಿದ್ಯಾರ್ಥಿನಿಯರಿಗೆ 2023ರ ಜೂ.5ರಿಂದ 2024ರ ಎ.3ರ ಮಧ್ಯಾವಧಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ. ಅಲ್ಲದೆ ವಿದ್ಯಾರ್ಥಿನಿಯೊಬ್ಬಳ ಸಹೋದರಿಯ ಮೊಬೈಲ್‌ಗೆ ಅಸಭ್ಯ ಫೋಟೊಗಳನ್ನು ಕಳುಹಿಸಿ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಯನ್ನು ಪೊಲೀಸರು ಸಂಜೆ ಉಡುಪಿಯ ವಿಶೇಷ ಪೊಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
BREAKING NEWS
Loading latest news...
Join our WhatsApp Channel Powered By : Online Pudu