ಉಡುಪಿ: ಬಿಜೆಪಿ ಯುವ ಮೋರ್ಚ ಮುಖಂಡನ ಮನೆಗೆ ಅಬಕಾರಿ ಪೊಲೀಸ್ ದಾಳಿ - 1,55,000 ಮೌಲ್ಯದ ಡಿಫೆನ್ಸ್ ಮದ್ಯ ವಶಕ್ಕೆ



ಬ್ರಹ್ಮಾವರ: ಬಿಜೆಪಿ ಯುವ ಮೋರ್ಚ ಮುಖಂಡನ ಮನೆಗೆ ಎ.8ರ ರಾತ್ರಿ ದಾಳಿ ನಡೆಸಿರುವ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಇಂದಿರಾನಗರ ನಿವಾಸಿ ರಮೇಶ್‌ ಪ್ರಭು ಬಂಧಿತ ಆರೋಪಿ.

ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿದೆ‌‌. ಆದ್ದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಮೇಶ್‌ ಪ್ರಭು ಅವರ ಪುತ್ರ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಮುಖಂಡ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಇರಿಸಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದೆ. ಈ ವೇಳೆ ಒಟ್ಟು 33.500 ಲೀಟರ್ ಡಿಫೆನ್ಸ್ ಮದ್ಯ ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ 1,55,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕಿ ಮಧುರಾ. ಎನ್‌. ದಾಸ್ ಮೊಕದ್ದಮೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu