-->

ಮಂಗಳೂರು: ಎ.22-30 ಶ್ರೀ ಶಿಬರೂರು ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ವಿಶೇಷ ಜಾತ್ರಾ ಮಹೋತ್ಸವ

ಮಂಗಳೂರು: ಎ.22-30 ಶ್ರೀ ಶಿಬರೂರು ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ವಿಶೇಷ ಜಾತ್ರಾ ಮಹೋತ್ಸವ


ಮಂಗಳೂರು: ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.22 - 30ರವರೆಗೆ ಬ್ರಹ್ಮಕುಂಭಾಭಿಷೇಕ, ನಾಗಮಂಡಲ, ವಿಶೇಷ ಜಾತ್ರಾ ಮಹೋತ್ಸವ ನಡೆಯಲಿದೆ.

ಕಳೆದ 8 ತಿಂಗಳಿನಿಂದ 3.5 ಕೋಟಿ ರೂ. ವೆಚ್ಚದಲ್ಲಿ ಸಿವಿಲ್ ಕಾಮಗಾರಿ, 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬ್ರಹ್ಮಕುಂಭಾಭಿಷೇಕ ಸಂದರ್ಭ ನಿತ್ಯ ಉಪಹಾರ, ಅನ್ನದಾನ ನಡೆಯಲಿದ್ದು ರಾಜ್ಯಾದ್ಯಂತ 3-4 ಲಕ್ಷ ಜನ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕೋಂಜಾಲಗುತ್ತು ಪ್ರಭಾಕರ ಶೆಟ್ಟಿ ಇವರು ಬ್ರಹ್ಮಕಲಶ ಮತ್ತು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿದ್ದು, 22 ಸಮಿತಿಗಳನ್ನು ರಚಿಸಲಾಗಿದೆ ಹಾಗೂ ಪ್ಲ್ಯಾಸ್ಟಿಕ್ ಮುಕ್ತ ಬಹ್ಮಕಲಶೋತ್ಸವ ಮಾಡಲು ನಿರ್ಧರಿಸಲಾಗಿದೆ.

ಎಪ್ರಿಲ್ 22ರಿಂದ 30ರವರೆಗೆ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದ್ದು, ಎ.26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ.

ಕ್ಷೇತ್ರದಲ್ಲಿ ಸಂಪೂರ್ಣ ಅಭಿವೃದ್ಧಿ ಕಾಮಗಾರಿಗಳು ವೇಗಗತಿಯಲ್ಲಿ ನಡೆಯುತ್ತಿದೆ. ದೈವಕ್ಕೆ 2 ಕೋಟಿ ಮೌಲ್ಯದ ಸ್ವರ್ಣ ಪಲ್ಲಕ್ಕಿ ಅರ್ಪಣೆಯಾಗಲಿದೆ. ಶಿಬರೂರು ಸ್ಥಳೀಯರು ತಮ್ಮ ಒಡವೆಯನ್ನೇ ಅರ್ಪಿಸಿದ ಪರಿಣಾಮ ಈ ಸ್ವರ್ಣ ಪಲ್ಲಕ್ಕಿ ನಿರ್ಮಾಣಗೊಂಡಿದೆ. ಎ.19 ರಂದು ಶ್ರೀ ಕ್ಷೇತ್ರ ಕಟೀಲಿನಿಂದ ಸಂಜೆ 4 ಗಂಟೆಗೆ ವಿಜೃಂಭಣೆಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ಊರ ಪರವೂರ ಭಕ್ತರು ಸೇವೆಯ ರೂಪದಲ್ಲಿ ಸಲ್ಲಿಸಲಿದ್ದಾರೆ. ರಸ್ತೆ ಅಭಿವೃದ್ಧಿ ಮತ್ತು ನೂತನ ಗೋಪುರ ನಿರ್ಮಾಣ ಮತ್ತು ಸುತ್ತುಪೌಳಿ  ಕಾಮಗಾರಿ ಪ್ರಗತಿಯಲ್ಲಿದೆ. ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಸಂದರ್ಭದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳನ್ನು ಸ್ವಾಮೀಜಿಗಳ ಸಮಕ್ಷಮದಲ್ಲಿ ಧಾರ್ಮಿಕ ಮುಖಂಡರ ಹಾಗೂ ಅನೇಕ ಸಾಂಸ್ಕೃತಿಕ ತಂಡಗಳ ಹಾಗೂ ಭಜನಾ ಮಂಡಳಿಗಳ ಮುಖಾಂತರ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದೆ.

Ads on article

Advertise in articles 1

advertising articles 2

Advertise under the article