-->
1000938341
ಮದುವೆ ಮುಗಿಸಿ ವಾಪಸ್ ಆಗುತ್ತಿದ್ದರವರು ಸೇರಿದ್ದು ಸ್ಮಶಾನಕ್ಕೆ - ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ದಾರುಣ ಸಾವು

ಮದುವೆ ಮುಗಿಸಿ ವಾಪಸ್ ಆಗುತ್ತಿದ್ದರವರು ಸೇರಿದ್ದು ಸ್ಮಶಾನಕ್ಕೆ - ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ದಾರುಣ ಸಾವು


ಜೈಪುರ: ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್‌ಮನೆಗೆ ಬರುತ್ತಿರುವಾಗ ಕಾರಿಗೆ ಲಾರಿ ಢಿಕ್ಕಿಯಾಗಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಯುವಕರು ಮೃತಪಟ್ಟ ಘಟನೆ ರಾಜಸ್ಥಾನದ ಜಲಾವರ್‌ ಜಿಲ್ಲೆಯ ಅಕೇರಾ ಸಮೀಪದ ಪಂಚೋಲಾ ಗ್ರಾಮದಲ್ಲಿ ನಡೆದಿದೆ.

ಈ ದುರ್ಘಟನೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಮದುವೆ ಕಾರ್ಯಕ್ರಮ ಮುಗಿಸ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಮದುವೆಯ ಸಂತೋಷವೂ ಶೋಕಕ್ಕೆ ತಿರುಗಿತ್ತು. ಅಪಘಾತದ ಸುದ್ದಿ ತಿಳಿದ ನಂತರ ವಧು-ವರರ ಮನೆಯಲ್ಲಿ ಗದ್ದಲ ಉಂಟಾಯಿತು. ಮದುವೆಗೆ ಬಂದವರೆಲ್ಲರೂ ತಮ್ಮ ಕೆಲಸ ಬಿಟ್ಟು ಘಟನಾ ಸ್ಥಳದ ಕಡೆಗೆ ಓಡಿದರು. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.

Ads on article

Advertise in articles 1

advertising articles 2

Advertise under the article