ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು


ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾರಿಗೆ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟ ಘಟನೆ ಕೆ.ಆರ್.ಪುರದಲ್ಲಿ ಸೋಮವಾರ ವರದಿಯಾಗಿದೆ.

ಪ್ರಕಾಶ್‌(35) ಮೃತ ಬೈಕ್‌ ಸವಾರ. 

ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಬೆಳಗ್ಗೆ ಪ್ರಚಾರಕ್ಕಾಗಿ ಕೆ.ಆ‌ರ್.ಪುರ ಕ್ಷೇತ್ರಕ್ಕೆ ಬಂದಿದ್ದರು. ಈ ವೇಳೆ ಅವರು ಅಲ್ಲಿದ್ದ ದೇವಸ್ಥಾನದ ಬಳಿ ತಮ್ಮ ಫಾರ್ಚೂನರ್ ಕಾರನ್ನು ನಿಲ್ಲಿಸಿದ್ದರು. ಕಾರಿನ ಬಾಗಿಲು ತೆಗೆಯುತ್ತಿದ್ದಾಗಲೇ ದ್ವಿಚಕ್ರ ವಾಹನದಲ್ಲಿ ಹಿಂದಿನಿಂದ ಬರುತ್ತಿದ್ದ ಪ್ರಕಾಶ್ ಢಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭ ಪ್ರಕಾಶ್‌ನ ಹಿಂದೆ ಬರುತ್ತಿದ್ದ ಬಸ್ ಆತನ ದೇಹದ ಮೇಲೆ ಹರಿದಿದೆ ಎಂಂದು ಹೇಳಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ನಗರದ ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu