ಬಂಟ್ವಾಳ: ದಂಪತಿಗೆ ಹಲ್ಲೆ - ಆರೋಪಿಗಳು ವಶಕ್ಕೆ

ಬಂಟ್ವಾಳ: ದಂಪತಿಗೆ ನಾಲ್ವರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ದಾಖಲಾಗಿದೆ.

ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾಗಿದರು. 

ಮಂಜುನಾಥ್ ಮಂಗಳೂರಿನಿಂದ ಪುತ್ತೂರಿನೆಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕಲ್ಲಡ್ಕ ಸಮೀಪದ ಕರಿಂಗಾಣ ಕ್ರಾಸ್ ಬಳಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾರಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು, ಇದೇ ಸಂದರ್ಭ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಸಂಚಾರ ಪೋಲೀಸರು ಭೇಟಿ ನೀಡಿ ವಾಹನ ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
BREAKING NEWS
Loading latest news...
Join our WhatsApp Channel Powered By : Online Pudu