ಮೂಡುಬಿದಿರೆ: ಮಿದುಳು ಜ್ವರಕ್ಕೆ ವಿದ್ಯಾರ್ಥಿನಿ ಬಲಿ


ಮೂಡುಬಿದಿರೆ: ಇಲ್ಲಿನ ವಾಲ್ಪಾಡಿ ನಿವಾಸಿ, ಎಸ್ಎಸ್ಎಲ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಮೆದುಳು ಜ್ವರಕ್ಕೆ ಬಲಿಯಾಗಿದ್ದಾಳೆ.

ವಾಲ್ಪಾಡಿ ನಿವಾಸಿ ಸತೀಶ್ ಶೆಟ್ಟಿಯವರ ಪುತ್ರಿ, ಶಿರ್ತಾಡಿ ಮೌಂಟ್ ಕಾರ್ಮೆಲ್‌ ಹೈಸ್ಕೂಲ್ ನ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ(15) ಮೆದುಳು ಜ್ವರಕ್ಕೆ ಬಲಿಯಾದ ದುರ್ದೈವಿ. ಮೆದುಳು ಜ್ವರ ಉಲ್ಬಣಗೊಂಡ ಪರಿಣಾಮ ಚಿಕಿತ್ಸೆಗಾಗಿ ಸ್ವಸ್ತಿ ಶೆಟ್ಟಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಆಕೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವಾಗಿದ್ದಳು. ಸ್ವಸ್ತಿ ಶೆಟ್ಟಿಯ ತಂದೆ ಸತೀಶ್‌ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿದೊದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ. 
BREAKING NEWS
Loading latest news...
Join our WhatsApp Channel Powered By : Online Pudu